ಮಂಡ್ಯ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದರು.
ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿದ್ದಾರೆ. ಬೆಂಗಳೂರಿನಿಂದ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಮಂಡ್ಯಕ್ಕೆ ತೆರಳಿದರು.
ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ನಿಂದ ಇಳಿದಂತ ಅವರು, ಪಿಇಎಸ್ ಕಾಲೇಜು ಮೈದಾನಕ್ಕೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದರು.
ಈ ವೇಳೆಯಲ್ಲಿ ಮಂಡ್ಯಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು, ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು. ಹೆಲಿಕಾಪ್ಟರ್ ನಲ್ಲಿ ಇದ್ದಂತ ವಸ್ತುಗಳನ್ನು ಬ್ಯಾಗ್ ಅನ್ನು ಪರಿಶೀಲನೆಯನ್ನು ಚುನಾವಣಾಧಿಕಾರಿಗಳು ನಡೆಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ
‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್