ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಬ್ಯಾನರ್ ತೆರವು ವಿಚಾರವಾಗಿ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನಲೆಯಲ್ಲಿ ಪೌರಾಯುಕ್ತೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ.
ಈ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಭೀತಿಯಿಂದಾಗಿ ಚಿಂತಾಮಣಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದಂತ ನ್ಯಾಯಾಲಯವು, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಅಂದಹಾಗೇ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಅವರಿಗೆ ರಾಜೀವ್ ಗೌಡ ದೂರವಾಣಿ ಕರೆ ಮಾಡಿ ಬ್ಯಾನರ್ ತೆರವು ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಧಮ್ಕಿ ಹಾಕಿದಂತ ಆಡಿಯೋ ವೈರಲ್ ಆಗಿತ್ತು. ರಾಜೀವ್ ಗೌಡ ಅವರ ನಡೆಯ ಬಗ್ಗೆ ವ್ಯಾಪಕ ಟೀಕೆ, ಬಂಧನಕ್ಕೆ ಒತ್ತಾಯ ಕೇಳಿ ಬಂದಿತ್ತು. ಇದೀಗ ಕೋರ್ಟ್ ಈ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ.ತಿಭಟಿಸಿದ್ದರು.
ಬಳ್ಳಾರಿಯಲ್ಲಿ ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ಮನೆಗೆ ಬಿಜೆಪಿ ನಾಯಕರು ಭೇಟಿ: 10 ಲಕ್ಷ ಪರಿಹಾರ ವಿತರಣೆ








