ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದಿದ್ದಾರೆ.
ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದ್ದಾರೆ.
‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’
BREAKING : ರಾಮ ಮಂದಿರ ಉದ್ಘಾಟನೆ ವೇಳೆ ಉಗ್ರ ದಾಳಿಗೆ ಸ್ಕೆಚ್ : ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ