ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್ : ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ – Kannada News Now


State

ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್ : ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನ ಹಲವು ಸ್ಥಳೀಯ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮುಖಂಡರು ಸಿ.ಟಿ. ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾಲಹಳ್ಳಿ ವಾರ್ಡ್ ನ ಕಾಂಗ್ರೆಸ್ ಪಾಲಿಕೆ ಸದಸ್ಯ ಜಾನಿ, ಯಶವಂತಪುರ ವಾರ್ಡ್ ನ ಜಿ.ಕೆ ವೆಂಕಟೇಶ್, ಹೆಚ್ಎಂಟಿ ವಾರ್ಡ್ ನ ಆಶಾ ಸುರೇಶ್, ಲಕ್ಷ್ಮೀದೇವಿನಗರ ವಾರ್ಡ್ ನ ಕಾಂಗ್ರೆಸ್ ಪಾಲಿಕೆ ಸದಸ್ಯ ವೇಳು ನಾಯ್ಕರ್ ಸೇರಿದಂತೆ ಹಲವು ನಾಯಕರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
error: Content is protected !!