ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಚರ್ಚಿಸಲು ಜುಲೈ.18ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯಸಭೆಯ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಲ್ಲಮಪ್ರಭು ಪಾಟೀಲ್ ಪತ್ರ ಬರೆದಿದ್ದಾರೆ.
ಅದರಲ್ಲಿ ದಿನಾಂಕ:15-07-2024ರ ಸೋಮವಾರದಿಂದ ದಿನಾಂಕ: 26-07-2024 ರ ಶುಕ್ರವಾರದವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದಿನಾಂಕ:18-07-2024ರ ಗುರುವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ಬ್ಯಾಡಿಸನ್ ಬ್ಲೂ (ಏಟ್ರಿಯಾ)” ಇಲ್ಲ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ ಅಂತ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರು, ವಿಧಾನ ಪಲಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಅವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಈ ಸಭೆಯಲ್ಲಿ ಉಪಸ್ಥಿತಲರುತ್ತಾರೆ ಅಂತ ಮಾಹಿತಿ ನೀಡಿದ್ದಾರೆ.
ಆದುದ್ದರಿಂದ ಎಲ್ಲಾ ಸದಸ್ಯರುಗಳು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕೋರಲು ಶಾಸಕಾಂಗ ಪಕ್ಷದ ನಾಯಕರಿಂದ ನಿರ್ದೇಶಿತನಾಗಿದ್ದೇನೆ ಅಂತ ತಿಳಿಸಿದ್ದಾರೆ.
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ