ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮಂಡ್ಯ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮದ್ದೂರು ತಾಲೂಕಿನ ಶಿವಾಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಿಂದ ಕಣಕ್ಕಿಳಿಯುವ ಅಭ್ಯರ್ಥಿಯನ್ನು ಪಕ್ಷ ಅಂತಿಮಗೊಳಿಸಿದ್ದು, ಈ ಬಗ್ಗೆ ನಾಯಕರು ಶೀಘ್ರದಲ್ಲೇ ಘೋಷಣೆ ಮಾಡಲಿದ್ದಾರೆ ಎಂದರು.
ಮಂಡ್ಯದಿಂದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ, ‘ನನಗೆ ಈ ಬಗ್ಗೆ ತಿಳಿದಿಲ್ಲ, ಜತೆಗೆ ಮೈತ್ರಿ ಅಭ್ಯರ್ಥಿ ಯಾರು ಎಂಬ ಚಿಂತೆಯೂ ಇಲ್ಲ ಎಂದರು.
ಮುಂಬರುವ ಚುನಾವಣೆಯಲ್ಲಿ ತಟಸ್ಥರಾಗಿರುತ್ತೇನೆ ಎಂಬ ಎಂಎಲ್ಸಿ ಮಧು ಜಿ ಮಾದೇಗೌಡ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ ಅವರು, ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ.ಆದರೆ ಶೀಘ್ರವೇ ಬಗೆಹರಿಯಲಿದೆ. .”
ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.