ಕಲಬುರ್ಗಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಕಲಬುರ್ಗಿಯ ಅಫಜಲಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಶಾಸಕ ಎಂ.ವೈ ಪಾಟೀಲ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರೋದಾಗಿ ತಿಳಿದು ಬಂದಿದೆ.
ಕಲಬುರ್ಗಿ ಜಿಲ್ಲೆಯ ಅಫಜಲಪುರದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ತೆರಳುತ್ತಿದ್ದಂತ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಶಾಸಕ ಎಂ.ವೈ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ತಿಳಇದು ಬಂದಿದೆ.
ಜೇವರ್ಗಿ(ಬಿ) ಗ್ರಾಮದ ಬಳಿಯಲ್ಲಿ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಕಾರಿನಲ್ಲಿದ್ದಂತ ಶಾಸಕ ಎಂ.ವೈ ಪಾಟೀಲ್ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.