ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂತಹ ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ತಿಳಿದು ಬಂದಿದೆ.
ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು. ಅವರಿಗೆ ಇಂದು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಅಂದಹಾಗೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ನಿಧನರಾಗಿರೋದಾಗಿ ತಿಳಿದು ಬಂದಿದೆ.
ರಾಜ್ಯದ ‘ಪ್ರಾಥಮಿಕ, ಪ್ರೌಢ ಶಾಲಾ ಹಿಂದಿ ಸಹಶಿಕ್ಷಕ’ರಿಗೆ ಬಿಗ್ ಶಾಕ್: ‘ಬಡ್ತಿ’ ಹಿಂಪಡೆದ ‘ಶಾಲಾ ಶಿಕ್ಷಣ ಇಲಾಖೆ’
‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ