ರಾಯಚೂರು: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಎಂಬುವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ ನಡೆಸಿದ್ದಾರೆ. ಈ ವೇಳೆಯಲ್ಲಿ ಹಲ್ಲೆಗೆ ಯತ್ನಿಸಿದಂತ ಅವರ ಆಪ್ತ, ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳದಲ್ಲಿದ್ದಂತ ಸಾರ್ವಜನಿಕರು ಥಳಿಸಿದ್ದಾರೆ.
ರಾಯಚೂರಿನ ಗೋರೆಬಾಳ ಗ್ರಾಮದಲ್ಲಿ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರೇ ಅಡ್ಡಗಟ್ಟಿದ್ದಾರೆ. ಲಿಂಗಸಗೂರು ಬ್ಲಾಕ್ ಅಧ್ಯಕ್ಷ ಗೋವಿಂದ್ ನಾಯಕ್ ಯಾರೆಂದು ಗೊತ್ತಿಲ್ಲ ಎಂಬುದಾಗಿ ಹೇಳಿದಂತ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಆ ಬಳಿಕ ಮಾತಿಗೆ ಮಾತು ಬೆಳೆದು ಹಲ್ಲೆ ಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಂದಲೇ ಕಾಂಗ್ರೆಸ್ ಎಂಎಲ್ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಅಚ್ಚರಿ ಉಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಾಗರದ ಆಸ್ಪತ್ರೆಯ ಜನರೇಟ್ ಕದ್ದವರ ವಿರುದ್ಧ ಸೂಕ್ತ ಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ
ಸನೋಫಿ ಕನ್ಸ್ಯೂಮರ್ ಹೆಲ್ತ್‌ಕೇರ್ ಇಂಡಿಯಾ ಲಿಮಿಟೆಡ್ 2ನೇ ತ್ರೈಮಾಸಿಕದಲ್ಲಿ 28% ಆದಾಯದ ಬೆಳವಣಿಗೆ