ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು.
ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ ಸಂಗತಿ ಎನಿಸಿಲ್ಲ; ಕಾಂಗ್ರೆಸ್ ನಿರ್ಧಾರ ರಾಮಭಕ್ತರಿಗೆ ಅನಿರೀಕ್ಷಿತವಲ್ಲ ಎಂದು ವಿಶ್ಲೇಷಿಸಿದರು.
ಕಾಂಗ್ರೆಸ್ ಪಕ್ಷದ ನಿರ್ಣಯ ನಿರೀಕ್ಷಿತವೇ ಆಗಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದ್ದ ಕಾಂಗ್ರೆಸ್ ಪಕ್ಷದವರು, ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಸರಕಾರ ವಜಾ ಮಾಡಿದ ಕಾಂಗ್ರೆಸ್, ರಾಮಭಕ್ತರಿಗೆ ತೊಂದರೆ ಕೊಡುತ್ತಿದ್ದ ಕಾಂಗ್ರೆಸ್ಸಿಗರ ಈ ನಿರ್ಣಯ ಯಾರಿಗೂ ಆಶ್ಚರ್ಯ ತಂದು ಕೊಟ್ಟಿಲ್ಲ ಎಂದರು.
ಜನವರಿ 22ರಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಿಶೇóಷ ಪೂಜೆ ಮಾಡುವಂತೆ ರಾಜ್ಯದ ಕಾಂಗ್ರೆಸ್ ಸರಕಾರ ಸುತ್ತೋಲೆÀ ಹೊರಡಿಸಿತ್ತು. ನಾಳೆ ಅಥವಾ ನಾಡಿದ್ದು ಈ ಆದೇಶವನ್ನು ಹಿಂದಕ್ಕೆ ಪಡೆಯಬಹುದು ಎಂದು ನುಡಿದರು. ಇವರಿಗೆ ರಾಮನ ಬಗ್ಗೆ ಭಕ್ತಿ- ಶ್ರದ್ಧೆ ಇಲ್ಲ. ಅಲ್ಪಸಂಖ್ಯಾತರ ತುಷ್ಟೀಕರಭಣದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಪಕ್ಷದವರಿಗೆ ಬುದ್ಧಿ ಬಂದಿಲ್ಲ; ಬುದ್ಧಿ ಬರುವುದೂ ಇಲ್ಲ ಎಂದರು. ಅವರಿಗೆ ಶ್ರೀರಾಮ ಬುದ್ಧಿ ಕೊಟ್ಟು ಕಾಪಾಡಬೇಕು ಎಂದು ತಿಳಿಸಿದರು.
ಹಿಂದೆ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ 25ರಿಂದ 30 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಈ ಸರಕಾರವು ಕಳೆದ ಆರೇಳು ತಿಂಗಳಿನಲ್ಲಿ ಅನೇಕ ಹಳೆಯ ಕೇಸುಗಳನ್ನು ರೀ ಓಪನ್ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದೆ. ಇದ್ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರು ಇವೆಲ್ಲವನ್ನೂ ಧೈರ್ಯದಿಂದ ಎದುರಿಸುತ್ತಾರೆ. ಬಿಜೆಪಿ ಅವರ ಜೊತೆ ಗಟ್ಟಿಯಾಗಿ ನಿಲ್ಲಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದೆ. ಅದಕ್ಕಾಗಿ ಅನೇಕ ಸಲಹೆಗಳನ್ನು ಮುಖಂಡರು ಕೊಟ್ಟಿದ್ದಾರೆ. ಎಲ್ಲ ವಿಚಾರಗಳ ಸವಿಸ್ತಾರವಾದ ಚರ್ಚೆ ಆಗಿದೆ ಎಂದು ತಿಳಿಸಿದರು.
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್
BREAKING : ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ‘ಎಲ್.ಕೆ ಅಡ್ವಾಣಿ’ ಭಾಗಿ : ವಿಶ್ವ ಹಿಂದೂ ಪರಿಷತ್