ಬೆಂಗಳೂರು: ಕಾಂಗ್ರೆಸ್ ( Congress ) ಆಡಳಿತದಲ್ಲಿ ಇಡೀ ಕರ್ನಾಟಕದ ಮಾಹಿತಿಯನ್ನು ಬಳಸಿಕೊಂಡಿದ್ದು, ಚುನಾವಣೆಯನ್ನೂ ( Election ) ಸೋತಿದ್ದಾರೆ. ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದು, ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಚುನಾವಣೆಯ ನಾಮಪತ್ರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಮಣಶ್ಶ್ರೀ ಪ್ರತಿಷ್ಠಾನ, ಬೆಂಗಳೂರು ಇಲ್ಲಿ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕಾಂಗ್ರೆಸ್ ಪಕ್ಷ ನಡೆಸಿದ ಸಾಮಾಜಿಕ ಆರ್ಥಿಕ ಸಮೀಕ್ಷೆ
ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ 130 ಕೋಟಿ ರೂ. ಖರ್ಚು ಮಾಡಿ, ಇಡೀ ಕರ್ನಾಟಕದ ಸಾಮಾಜಿಕ ಆರ್ಥಿಕ ಸಮೀಕ್ಷೆ ಎಂಬ ಹೆಸರಿನಲ್ಲಿ ಜಾತಿ , ಉಪಜಾತಿಗಳನ್ನು ಸೃಷ್ಟಿಸಿ, ದಾಖಲೆಗಳನ್ನು ಮಾಡಿ, ಆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸದೇ, ಚುನಾವಣೆಯ ಉದ್ದೇಶಕ್ಕೆ ಕಾಂಗ್ರೆಸ್ ಬಳಸಿಕೊಂಡಿತು. ಈ ವಿಷಯದಲ್ಲಿ ಶಿಕ್ಷೆ ಮೊದಲು ಸಿದ್ದರಾಮಯ್ಯನವರ ಸರ್ಕಾರಕ್ಕೆ ಮೊದಲು ಆಗಬೇಕು. ಪ್ರಸ್ತುತ ಈ ವಿಚಾರದಲ್ಲಿ ಸರ್ಕಾರಕ್ಕೆ ಸಂಬಂಧಿಸಿರುವುದಿಲ್ಲ. ತಳಹಂತದಲ್ಲಿ ಈ ಕೆಲಸವಾಗಿದ್ದರೆ, ಸೂಕ್ತ ವಿಚಾರಣೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.
ತಜ್ಞರ ಸಮಿತಿಯಿಂದ ಪರಿಶೀಲನೆ
ಮೈಸೂರಿನಲ್ಲಿ ತಂಗುದಾಣದ ವಿನ್ಯಾಸದ ಬಗ್ಗೆ ಶಾಸಕ ರಾಮದಾಸ್ ಅವರು ಸ್ಥಳೀಯ ಸಂಸದರ ಮೇಲೆ ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿವಾವದ ಬಗ್ಗೆ ಪರಿಶೀಲಿಸಲು ನಡೆಸಲು ತಜ್ಞರ ಸಮಿತಿರನ್ನು ರಚಿಸಲು ತಿಳಿಸಲಾಗಿದೆ. ಈ ವಿಷಯದಲ್ಲಿ ಸ್ಥಳೀಯ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಏಕೆ ಬಂದಿದೆ ಎಂದು ತಿಳಿಯುವುದಕ್ಕಿಂತ , ತಜ್ಞರ ಸಮಿತಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.