Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಪಕ್ಷ ಸ್ಕೀಂ ಬದಲು ಸ್ಕ್ಯಾಮ್ ಬಗ್ಗೆ ಯೋಚನೆ: ಬಿ.ವೈ ವಿಜಯೇಂದ್ರ
KARNATAKA

ಕಾಂಗ್ರೆಸ್ ಪಕ್ಷ ಸ್ಕೀಂ ಬದಲು ಸ್ಕ್ಯಾಮ್ ಬಗ್ಗೆ ಯೋಚನೆ: ಬಿ.ವೈ ವಿಜಯೇಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

“ಗೋಲ್ಡ್ ಫಿಂಚ್ ಹೊಟೇಲ್” ನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ವಿಬಿ ಜಿ ರಾಮ್ ಜಿ ಯೋಜನೆ ಜಾರಿಯ ಮೂಲಕ ಲಕ್ಷಾಂತರ ಕೋಟಿ ಹೂಡಿಕೆ ಮಾಡಿ ಗ್ರಾಮೀಣ ಅಭಿವೃದ್ಧಿ ಕನಸು ನನಸಾಗಿಸಲು ಮುಂದಾದುದು ತಪ್ಪೇ ಎಂದು ಕೇಳಿದರು.

ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಏಳೆಂಟು ಲಕ್ಷ ಕೋಟಿ ಖರ್ಚು ಮಾಡುವ ಈ ಯೋಜನೆ ಸುಲಲಿತವಾಗಿ ಸಾಗಬೇಕು; ಬಡವರಿಗೆ ತಲುಪಬೇಕೆಂದು ಪ್ರಧಾನಿಯವರು ಆಲೋಚಿಸಿದ್ದೇ ತಪ್ಪೇ ಹಾಗಿದ್ದರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಹತ್ತಾರು ವರ್ಷ ಆಡಳಿತ ಮಾಡಿದಾಗ ಸ್ಕೀಂ ಬಗ್ಗೆ ಯೋಚಿಸಿಲ್ಲ; ಸ್ಕ್ಯಾಮ್ ಬಗ್ಗೆಯೇ ಅವರು ಯೋಚಿಸಿದರು ಎಂದು ಟೀಕಿಸಿದರು.

ಜಿ ರಾಮ್ ಜಿ ಮೂಲಕ ಮೋದಿಜೀ ಅವರು ಒಂದು ಚಾರಿತ್ರಿಕ ನಿರ್ಧಾರ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಆದರೆ, ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಯೋಜನೆಯನ್ನು ಮರು ಜಾರಿ ಮಾಡುವ ಮೊದಲೇ ಕಾಂಗ್ರೆಸ್ ಪಕ್ಷವು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಸುಳ್ಳುಗಳನ್ನು ಹರಡುತ್ತಿದೆ ಎಂದು ಆಕ್ಷೇಪಿಸಿದರು.ಕಾಂ

ಗ್ರೆಸ್ ಪಕ್ಷವು ಯಾವತ್ತು ಮಹಾತ್ಮ ಗಾಂಧೀಜಿ ಅವರನ್ನು ಗೌರವಿಸಿರಲಿಲ್ಲ ಎಂಬುದು ದೇಶಕ್ಕೇ ಗೊತ್ತಿರುವ ಸಂಗತಿ. ಅಲ್ಲದೇ ಕಾಂಗ್ರೆಸ್ ಪಕ್ಷವು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನೂ ಗೌರವಿಸುತ್ತಿರಲಿಲ್ಲ ಎಂದು ಟೀಕಿಸಿದರು.

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಆಗಬೇಕಿದೆ. ಜೊತೆಗೇ ಮೂಲಭೂತ ಸೌಕರ್ಯಗಳನ್ನೂ ಕೊಡಬೇಕಾಗಿದೆ. ಇದೇ ಉತ್ತಮ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಡೀ ಯೋಜನೆಯಲ್ಲಿ ಗಮನಾರ್ಹ, ಮೌಲ್ಯಯುತ ಬದಲಾವಣೆಗಳನ್ನು ಜಾರಿಗೊಳಿಸಿದ್ದಾರೆ ಎಂದು ವಿವರಿಸಿದರು.

ಕೆಲಸ ಮಾಡುವ ದಿನಗಳನ್ನು 100 ರಿಂದ 125ಕ್ಕೆ ಏರಿಸಿದ್ದಾರೆ. ಕೃಷಿ ಚಟುವಟಿಕೆ ನಡೆಯುವಾಗ ರೈತರಿಗೆ ಅನಾನುಕೂಲ ಆಗಬಾರದೆಂಬ ದೃಷ್ಟಿಯಿಂದ ಆ ಸಂದರ್ಭದಲ್ಲಿ ಜಿ ರಾಮ್ ಜಿ ನಿಲ್ಲಿಸಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಿಂದಿನಂತೆ ತೀರ್ಮಾನಗಳು ಆಗಲಿವೆ. ಗ್ರಾಮ ಪಂಚಾಯಿತಿ ಅಧಿಕಾರವನ್ನು ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ, ನರೇಂದ್ರ ಮೋದಿಜೀ ಅವರು ಮಾಡುತ್ತಿಲ್ಲ ಎಂದು ನುಡಿದರು.

ಬಿಜೆಪಿ ಮತ್ತು ಜೆಡಿಎಸ್, ಸುಳ್ಳು- ಅಪಪ್ರಚಾರಕ್ಕೆ ಅವಕಾಶ ಕೊಡುವುದಿಲ್ಲ. ಗ್ರಾಮ ಮಟ್ಟಕ್ಕೂ ನಾವು ತೆರಳಿ ಜನರಿಗೆ, ಕಾರ್ಮಿಕರಿಗೆ ಮನವರಿಕೆ ಮಾಡಲಿದ್ದೇವೆ. ಕಾಂಗ್ರೆಸ್ ಪಕ್ಷದ ಷಡ್ಯಂತ್ರವನ್ನು ನಾವು ಬಯಲಿಗೆ ಎಳೆಯುತ್ತೇವೆ ಎಂದು ಪ್ರಕಟಿಸಿದರು.

ವಿಬಿ ಜಿ ರಾಮ್ ಜಿ ಸಮರ್ಪಕವಾಗಿ ಅನುಷ್ಠಾನದ ಮೂಲಕ ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಯ ಪ್ರಮುಖ ಚಿಂತನೆ ಇದರಡಿ ಇದೆ ಎಂದು ವಿವರಿಸಿದರು.

ಆದರೆ, ಈ ದೇಶದಲ್ಲಿ 55ರಿಂದ 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಸ್ಕೀಂಗಳಲ್ಲಿ ನಂಬಿಕೆ ಇಟ್ಟಿರಲಿಲ್ಲ; ಅವರು ಸ್ಕ್ಯಾಮ್‍ಗಳಲ್ಲಿ (ಹಗರಣ) ನಂಬಿಕೆ ಇಟ್ಟಿದ್ದರು ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಹಾಗೂ ಯುಪಿಎ ಅವಧಿಯಲ್ಲಿ ನಡೆದ ಹಗರಣಗಳಿಂದ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿಲ್ಲ. ಇವತ್ತು ಗೌರವಾನ್ವಿತ ಪ್ರಧಾನಿಯವರು ಗ್ರಾಮೀಣ ಜನತೆಗೆ ಪ್ರಯೋಜನ ನೀಡುವ ದೃಷ್ಟಿಯಿಂದ ಯೋಜನೆ ತರಲು ಮುಂದಾಗಿದ್ದಾರೆ. ಭ್ರಷ್ಟಾಚಾರ ಇಲ್ಲದ, ಸಮರ್ಪಕ ಲೆಕ್ಕಪತ್ರ ಇರುವ ಯೋಜನೆ ತರುತ್ತಿರುವಾಗ ಕಾಂಗ್ರೆಸ್ ಪಕ್ಷವು ಸುಳ್ಳುಗಳ ಅಪಪ್ರಚಾರ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರ ಸ್ವಾಗತಾರ್ಹ. ಸದನದಲ್ಲಿ ಇದನ್ನು ಚರ್ಚಿಸೋಣ. ಮನ್‍ರೇಗಾ ಮೂಲಕ ಕಾಂಗ್ರೆಸ್ ಇಷ್ಟು ವರ್ಷಗಳಲ್ಲಿ ಏನು ಮಾಡಿದೆ? ಕಳೆದ 10 ವರ್ಷಗಳಲ್ಲಿ ನಾವು ಮೋದಿಜೀ ಅವರ ನಾಯಕತ್ವದಡಿ ಮಾಡಿದ ಸಾಧನೆ ಏನು ಎಂಬುದನ್ನು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಸವಾಲು ಹಾಕಿದರು.

ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮೋದಿಜೀ ಅವರ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದು ಹತಾಶೆಯ ಸ್ಥಿತಿಯಲ್ಲಿದೆ. ಎನ್‍ಡಿಎ ಸರಕಾರದ ಪ್ರತಿಯೊಂದು ಯೋಜನೆ ಬಗ್ಗೆ ಅದು ಸುಳ್ಳು ಹೇಳುತ್ತಿದೆ. ಕರ್ನಾಟಕದಲ್ಲೂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಜಾರಿಗೊಳಿಸದೇ ಇರಲು ನಿರ್ಧರಿಸಿದರು. ರಾಜ್ಯ ಶಿಕ್ಷಣ ನೀತಿ ಜಾರಿ (ಎಸ್‍ಇಪಿ) ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. ಇಲ್ಲಿನವರೆಗೆ ಹೊಸ ನೀತಿ ಜಾರಿ ಆಗಿಲ್ಲ ಎಂದು ಟೀಕಿಸಿದರು. ಯುಪಿಎ ಸರಕಾರದ 2 ಜಿ ಸ್ಕ್ಯಾಮ್, ಕಲ್ಲಿದ್ದಲು ಹಗರಣ ಸೇರಿ ವಿವಿಧ ಹಗರಣಗಳ ಕುರಿತು ನಾನು ಪುನರುಚ್ಚಾರ ಮಾಡಲು ಹೋಗುವುದಿಲ್ಲ. ದೇಶದ ಜನರು ಕಾಂಗ್ರೆಸ್ ಪಕ್ಷದ ಆಡಳಿತವನ್ನು ಇನ್ನೂ ಮರೆತಿಲ್ಲ ಎಂದು ತಿಳಿಸಿದರು. ಅಲ್ಲದೇ ಮಾಧ್ಯಮ ಪ್ರತಿನಿಧಿಗಳಿಗೆ ಸಂಕ್ರಾಂತಿಯ ಶುಭಾಶಯಗಳನ್ನೂ ಕೋರಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.