ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿ ರಾಮ್ ಜಿ ಸಮರವನ್ನೇ ಸಾರಿದೆ. ಇದೇ ಕಾರಣಕ್ಕೆ ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಜಿ ರಾಮ್ ಜಿ ವಿರುದ್ಧ ಸಮರ ಮುಂದುವರೆದಿದೆ. ನಾಳೆ ಲೋಕಭವನ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ವಿರುದ್ಧ ನಾಳೆ ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ.
ಈ ಎಲ್ಲಾ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಲೋಕಭವನದ ಬಳಿಯಲ್ಲಿ ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ಕಾಂಗ್ರೆಸ್ ಜಿ ರಾಮ್ ಜಿ ವಿರುದ್ಧ ಪ್ರತಿಭಟನೆ, ಕೈ ಪಕ್ಷದ ವಿರುದ್ಧ ಬಿಜೆಪಿ, ಜೆಡಿಎಸ್ ರಣ ಕಹಳೆ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಳಿಗ್ಗೆ ಬೆಳ್ಳುಳ್ಳಿ ತಿಂದ್ರೆ ನಿಜವಾಗಿಯೂ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತಾ? ವಿಜ್ಞಾನ ಹೇಳೋದೇನು ಓದಿ
ಗೋಕರ್ಣ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಣೆ








