ಬೆಂಗಳೂರು: ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬರುತ್ತಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರರನ್ನು ತುಚ್ಛವಾಗಿ ನೋಡಿದ್ದ ಕಾಂಗ್ರೆಸ್ ಪಕ್ಷವು 370ನೇ ವಿಧಿ ಮೂಲಕ ಅವತ್ತೇ ಓಲೈಕೆ ರಾಜಕಾರಣ ಮಾಡಿತ್ತು ಎಂದು ಟೀಕಿಸಿದರು. ಇದನ್ನು ಯೇ ದೇಶ್ ಮೇ ದೋ ಸಂವಿಧಾನ್, ದೋ ನಿಶಾನ್ ನಹಿ ಚಲೇಗಾ ಎಂದು ಆಗಲೇ ಶ್ಯಾಮಪ್ರಸಾದ ಮುಖರ್ಜಿ ಅವರು ಖಂಡಿಸಿದ್ದರು ಎಂದು ವಿವರಿಸಿದರು.
ಆಗ ಕಾಂಗ್ರೆಸ್ಸಿನ ತಪ್ಪು ನೀತಿ, ಓಲೈಕೆ ರಾಜಕೀಯದ ವಿರುದ್ಧ ಜನಸಂಘ ಪ್ರಾರಂಭವಾಗಿತ್ತು ಎಂದ ಅವರು, 370ನೇ ವಿಧಿ ತೆಗೆದಿದ್ದು ಯಾರು ಎಂದು ಪ್ರಶ್ನಿಸಿದರು. ಬಿಜೆಪಿ ಹುಟ್ಟಿದ್ದೇ ಅಂಬೇಡ್ಕರರ ಸಿದ್ಧಾಂತಗಳನ್ನು ಬೆಂಬಲಿಸುವ ಉದ್ದೇಶದಿಂದ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ
ಇದು ರೀಲ್ ಅಲ್ಲ, ರಿಯಲ್ ಸ್ಟೋರಿ: ಅದೇನು ಅಂತ ಈ ಸುದ್ದಿ ಓದಿ, ನೀವೇ ಅಚ್ಚರಿ ಪಡ್ತೀರಿ