ಬೆಂಗಳೂರು: ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ರಾಜ್ಯ ಕಾಂಗ್ರೆಸ್ ನಾಯಕರು ಮತದಾನ ಮಾಡಿದ್ದಾರೆ.
BIGG NEWS: ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆ ಸ್ಥಾಪನೆ ಮಾಡಿದ್ದು, ಮೂರನೇ ಸಂಖ್ಯೆಯ ಈ ಮತಗಟ್ಟೆಯಲ್ಲಿ ಎಐಸಿಸಿ ಚುನಾವಣಾ ಅಭ್ಯರ್ಥಿಗಳಲ್ಲಿ ಒಬ್ಬರಾದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಆಗಮಿಸಿದ ಅವರು ಜೊತೆಯಲ್ಲೇ ತೆರಳಿ ಮತದಾನ ಮಾಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಆರಂಭವಾಗಿರುವ ಮತದಾನ ಪ್ರಕ್ರಿಯೆ ಚುರುಕಾಗಿ ಸಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ ಕೆ ಶಿವಕುಮಾರ್ ಮಾತ್ರವಲ್ಲದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಮತದಾನ ಮಾಡಿದ್ದಾರೆ.