ಬೆಂಗಳೂರು : “ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.
ಉಪಚುನಾವಣೆ ಘೋಷಣೆಯಾಗಿದ್ದು, ಪಕ್ಷದ ತಯಾರಿ ಹೇಗಿದೆ ಎಂದು ಕೇಳಿದಾಗ, “ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಬಗ್ಗೆ ಕೇಳಿದಾಗ, “ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು” ಎಂದು ತಿಳಿಸಿದರು.
ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು ಅದನ್ನು ನಂಬುತ್ತೇನೆ” ಎಂದು ತಿಳಿಸಿದರು.
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!
BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!