ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಮೊದಲ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ಮೊದಲ ಪಟ್ಟಿ ಲೋಕಸಭಾ ಚುನಾವಣೆಗೆ ಬಿಡುಗಡೆ ಮಾಡೋ ಸಾಧ್ಯತೆ ಇದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಸುರ್ಜೇವಾಲ ಅವರ ಜತೆಗಿನ ಸಭೆ ಕುರಿತು ಕೇಳಿದಾಗ, “ನಿನ್ನೆ ನಾನು, ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಗ್ಯಾರಂಟಿ ಸಮಿತಿಯಲ್ಲಿ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರಲ್ಲಿ ನಾಲ್ಕು ಸಾವಿರ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಲಾಗುವುದು. ಇನ್ನು 7ರಂದು ದೆಹಲಿಯಲ್ಲಿ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ಇದರಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ” ಎಂದು ತಿಳಿಸಿದರು.
ಕುಡಿಯುವ ನೀರಿನ ಕೊರತೆ ಗಂಭೀರವಾಗಿ ಪರಿಗಣಿಸಿದ್ದೇವೆ
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದೇವೆ. ನಾವು ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ಗಳನ್ನ ವಶಕ್ಕೆ ಪಡೆಯುತ್ತಿದ್ದೇವೆ. ಎಲ್ಲೆಲ್ಲಿ ನೀರಿನ ಲಭ್ಯತೆ ಇದೆ ಎಂದು ಗುರುತಿಸುತ್ತಿದ್ದೇವೆ. ಇನ್ನು ಕಾವೇರಿ 5ನೇ ಹಂತ ಮೇ ಅಂತ್ಯದ ವೇಳೆಗೆ ಮುಕ್ತಾಯವಾಗಲಿದೆ. ನಾವು ಜನರಿಗೆ ರಿಯಾಯಿತಿ ದರದಲ್ಲಿ ನೀರು ಪೂರೈಸುತ್ತೇವೆ. ನನ್ನ ಮನೆಯ ಕೊಳವೆಬಾವಿ ಸೇರಿದಂತೆ ನಗರದಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿವೆ” ಎಂದು ತಿಳಿಸಿದರು.
‘ದೇಶದ್ರೋಹ ಕೆಲಸ’ದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ -ಡಿಸಿಎಂ ಡಿಕೆ ಶಿವಕುಮಾರ್
ನನಗೆ ದೇಶವೇ ಮೊದಲು, ಅವರಿಗೆ ಕುಟುಂಬವೇ ಮೊದಲು: ವಿಪಕ್ಷಳಿಗೆ ತಿವಿದ ಪ್ರಧಾನಿ ನರೇಂದ್ರ ಮೋದಿ