ಬೆಂಗಳೂರು: ಬಿಜೆಪಿ & RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. RSS ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿಗೆ ಡಿಚ್ಚಿ ನೀಡಿದೆ.
ಬಿಜೆಪಿ & RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ.
RSS 'ಪ್ಯಾಂಟು' ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?! pic.twitter.com/88tLhMNeGN
— Karnataka Congress (@INCKarnataka) August 20, 2022
ಈ ಬಗ್ಗೆ ಟ್ವಿಟ್ ನಲ್ಲಿ ( Twitter ) ತಾನು ಕಾಂಗ್ರೆಸ್ ಕಾರ್ಯಕರ್ತ ( Congress Worker ) ಎಂದು ಹೇಳಿದ್ದಂತ ಸಂಪತ್ ಆರ್ ಎಸ್ ಎಸ್ ಧಿರಿಸಿನ ಪೋಟೋ ಸಹಿತ ಟ್ವಿಟ್ ಮಾಡಿರುವಂತ ಕಾಂಗ್ರೆಸ್, ಬಿಜೆಪಿ ಹೇಳುವ ಸುಳ್ಳುಗಳಿಗೆ ‘ಸತ್ಯ’ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ! ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ. ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ? ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನಿಸಿದೆ.
ಬಿಜೆಪಿ ಹೇಳುವ ಸುಳ್ಳುಗಳಿಗೆ 'ಸತ್ಯ'ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ!
ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ.
ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ?
ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? pic.twitter.com/kehs3lU2op
— Karnataka Congress (@INCKarnataka) August 20, 2022
ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಗಂಭೀರ ಆರೋಪ ಮಾಡಿದೆ.
ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ @BJP4Karnataka ಉತ್ತರಿಸಬೇಕು.
ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ?
ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್ಗೇಕೆ ಆಪ್ತನಾಗಿದ್ದಾನೆ. pic.twitter.com/t1FWjZFvDk
— Karnataka Congress (@INCKarnataka) August 20, 2022