ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಬಿಬಿಎಂಪಿ ಚುನಾವಣೆಗೆ ಭರ್ಜರಿ ತಯಾರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆಗೂ ಮುನ್ನವೇ ಬಿಬಿಎಂಪಿ ಚುನಾವಣೆ ಪ್ರಾಥಮಿಕ ವರದಿಗೆ ಸಮಿತಿಯನ್ನು ರಚನೆ ಮಾಡಿ ಆದೇಶಿಸಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಅಗತ್ಯವಾದ ಪೂರ್ವಸಿದ್ಧತೆಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವರದಿಯನ್ನು ಸಲ್ಲಿಸಲು ಈ ಕೆಳಕಾಣಿಸಿದಂತೆ “ಬಿ.ಬಿ.ಎಂ.ಪಿ. ಚುನಾವಣೆ ಪ್ರಾಥಮಿಕ ವರದಿ ಸಮಿತಿ”ಯನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸದರಿ ಸಮಿತಿಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಸಚಿವರುಗಳು, ಸಂಸದರು, ಶಾಸಕರು, ಡಿಸಿಸಿ ಅಧ್ಯಕ್ಷರು, ಮಾಜಿ ಶಾಸಕರು, 2024ರ ಲೋಕಸಭೆ ಅಭ್ಯರ್ಥಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು ಹಾಗೂ ಇತರ ಹಿರಿಯ ನಾಯಕರುಗಳನ್ನು ಸಂಪರ್ಕಿಸಿ ಅವರೊಂದಿಗೆ ಚರ್ಚಿಸಿ ಬಿಬಿಎಂಪಿ ಚುನಾವಣೆ ಅಧ್ಯಯನ ನಡೆಸಿ ಒಂದು ತಿಂಗಳುಗಳ ಒಳಗಾಗಿ ಒಂದು ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ಪೂರ್ವಕ್ಕೆ ಮಾಜಿ ಮೇಯರ್ ಜೆ.ಹುಚ್ಚಪ್ಪ, ಮಾಜಿ ಉಪ ಮೇಯರ್ ಮಂಜುಳಾ ನಾಯ್ಡು, ಮಾಜಿ ಆಡಳಿತ ಪಕ್ಷದ ನಾಯಕರಾದಂತ ಹೆಚ್.ಜಯರಾಮ್ ಹಾಗೂ ಮಾಜಿ ಉಪ ಮೇಯರ್ ಲಕ್ಷ್ಮೀನಾರಾಯಣ ಅವರನ್ನು ವರದಿ ನೀಡುವಂತೆ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ.
ಬೆಂಗಳೂರು ಪಶ್ಚಿಮಕ್ಕೆ ಮಾಜಿ ಮೇಯರ್ ಸಂಪತ್ ರಾಜ್, ಮಾಜಿ ಆಡಳಿತ ಪಕ್ಷದ ನಾಯಕ ಆರ್ಎಸ್ ಸತ್ಯನಾರಾಯಣ, ಮಾಜಿ ಮೇಯರ್ ಮಮತಾಜ್ ಬೇಗಂ, ಕಾಂಗ್ರೆಸ್ ಮುಖಂಡ ಎಂ ಶಿವರಾಜ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.
ಬೆಂಗಳೂರು ಉತ್ತರಕ್ಕೆ ಮಾಜಿ ಮೇಯರ್ ಪಿಆರ್ ರಮೇಶ್, ಶಾಂತಕುಮಾರಿ, ಮಾಜಿ ಆಡಳಿತ ಪಕ್ಷದ ನಾಯಕ ಎಂ ಉದಯ ಶಂಕರ್, ಮಾಜಿ ಉಪ ಮೇಯರ್ ಎಲ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ, ವರದಿ ನೀಡುವಂತೆ ಡಿಸಿಎಂ ಸೂಚಿಸಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಮಾಜಿ ಮೇಯರ್ ಎಂ ರಾಮಚಂದ್ರಪ್ಪ, ಜಿ.ಪದ್ಮಾವತಿ, ಮಾಜಿ ಆಡಳಿತ ಪಕ್ಷದ ನಾಯಕ ಬಿ.ಟಿ ಶ್ರೀನಿವಾಸ್, ಅಬ್ದುಲ್ ವಾಜಿದ್ ಹಾಗೂ ಮಾಜಿ ಉಪ ಮೇಯರ್ ಇಂದಿರಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಇನ್ನೂ ಬೆಂಗಳೂರು ಸೆಂಟ್ರಲ್ ವಿಭಾಗಕ್ಕೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ವೆಂಕಟೇಶ್ ಮೂರ್ತಿ, ಮಾಜಿ ಆಡಳಿತ ಪಕ್ಷದ ನಾಯಕ ರಿಜ್ವಾನ್ ನವಾಬ್ ಹಾಗೂ ನಾಗರಾಜ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BIG NEWS: ‘ರೈಲ್ವೆ ಇಲಾಖೆ’ಯಲ್ಲೊಬ್ಬ ‘ಪೋನ್ ಪೇ’ ಮೂಲಕ ಲಂಚ ಪಡೆಯುವ ‘TC’: ಇಲ್ಲಿದೆ ‘ಲಂಚಾವತಾರ’ದ ಸ್ಟೋರಿ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!