ಗದಗ: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ಅವರು ಇಂದು ಮೃತಪಟ್ಟಿದ್ದಾರೆ.
ಇನ್ನೂ, ನಾಳೆ ಬೆಳಗ್ಗೆ 5 ಗಂಟೆಗೆ ಪಾರ್ಥಿವ ಶರೀರ ಗದಗದ ಹುಡ್ಕೋ ಕಾಲೋನಿಯಲ್ಲಿರುವ ಅವರ ಸ್ವಗೃಹ ತಲುಪಲಿದ್ದು, ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ನಂತರ ಗ್ರಾಮದ ತೋಟದ ಮನೆಯಲ್ಲಿ ಮಧ್ಯಾಹ್ನ 3 ಗಂಟೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಹೃದಯಾಘಾತದಿಂದ ಕುಸಿದು ಬಿದ್ದಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.ಅಂದಹಾಗೇ 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಂತ ಅವರು, ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರು ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಸಂತಾಪ ಸೂಚಿಸಿದ್ದಾರೆ.
BREAKING: ‘ಮಾಜಿ ಶಾಸಕ ಬಿ.ಸುರೇಶ್ ಗೌಡ’ ಕೊಲೆ ಬೆದರಿಕೆ ಆರೋಪ: ಶಾಸಕ ಡಿ.ಸಿ ಗೌರಿಶಂಕರ್ ದೂರು, ಎಫ್ಐಆರ್ ದಾಖಲು
‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕುಟುಂಬ ಸಮೇತ ಪ್ರಯಾಣಿಸುವಾಗ ಒಂದೇ ಟಿಕೆಟ್ ಸಾಕು..!