ದಾವಣಗೆರೆ : 2023 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಇದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ. ಹಳಿ ತಪ್ಪಿರುವ ಈ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದರು.
ಎಸ್. ಎಂ. ಕೃಷ್ಣ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ಹಗರಣ ಮಾಡಲಿಲ್ಲ, ಭ್ರಷ್ಟಾಚಾರವೂ ಇಲ್ಲ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದರು. ವೋಟರ್ ಐಡಿ ಡಿಲೀಟ್, ಕದಿಯುವಂತಹ ಮಟ್ಟದಲ್ಲಿ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ., ಯುವಕರಿಗೆ ಉದ್ಯೋಗ ನೀಡಿಲ್ಲ, ರೈತರಿಗೆ ಸಹಾಯ ಮಾಡಿಲ್ಲ ಎಂದು ಕಿಡಿಕಾರಿದರು.
ಈ ವಿಷಯಗಳ ಬಗ್ಗೆ ಮಾತನಾಡಿ ನಿಮ್ಮ, ಧಮ್ಮು ತಾಕತ್ತು ತೋರಿಸಿ : ಕಟೀಲ್ ಗೆ ಟ್ವೀಟ್ ನಲ್ಲಿ ಕಾಂಗ್ರೆಸ್ ಸವಾಲ್