ಬೆಂಗಳೂರು: ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, “ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಅವರು ಜನರಿಗೆ ಹೇಗೆ ಮುಖ ತೋರಿಸುತ್ತಾರೆ?
ಬಿಜೆಪಿಗಿಂತ ಮುನ್ನ ನೀವು ಟಿಕೆಟ್ ಘೋಷಣೆ ಮಾಡಿದ್ದೀರಿ ಎಂದು ಕೇಳಿದಾಗ, “ಈಗಿನ ರಾಜಕೀಯ ನೋಡಿ ಬಹಳ ನೋವಾಗುತ್ತಿದೆ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರನ್ನು ಈಗ ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ. ನಾವು ಕುಮಾರಣ್ಣ ಅವರನ್ನು 5 ವರ್ಷ ಸಿಎಂ ಮಾಡಬೇಕು ಎಂದು ಮೈತ್ರಿ ಸರ್ಕಾರ ಮಾಡಿದೆವು. ಆ ಸರ್ಕಾರ ಬೀಳಿಸಿದವರ ಜೊತೆ ಈಗ ಕುಮಾರಸ್ವಾಮಿ ಸ್ನೇಹ ಬೆಳೆಸುತ್ತಿದ್ದಾರೆ. ಅವರ ವಕ್ತಾರರಾಗಿದ್ದಾರೆ. ಇದೆಲ್ಲವನ್ನೂ ನಿರ್ಧರಿಸಲು ಜನರಿಗೆ ಬಿಡುತ್ತೇನೆ” ಎಂದು ತಿಳಿಸಿದರು.
ಸರ್ಕಾರ ಇದ್ದಾಗ ನೀವು ತಬ್ಬಾಡಿದ್ದೀರಿ, ನಿಮಗಿರುವ ನೋವು ಅವರಿಗಿಲ್ಲ ಅಲ್ಲವೇ ಎಂದು ಕೇಳಿದಾಗ, “ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ನಮ್ಮ ಸರ್ಕಾರ ಎಂದೇ ನಾವು ಹೇಳುತ್ತಿದ್ದೇವೆ. ಅವರಿಗೆ ಆ ನೋವು ಇಲ್ಲದಿದ್ದರೂ ಬೇಡ. ಆದರೆ ರಾಜಕೀಯ ಸಿದ್ಧಾಂತ ಮುಖ್ಯ ಅಲ್ಲವೇ? ಕುಮಾರಸ್ವಾಮಿ ಅವರು ಇದನ್ನು ಹೇಗೆ ಅರಗಿಸಿಕೊಳ್ಳುತ್ತಾರೆ? ಜನರ ಮುಂದೆ ಹೋಗಿ ಹೇಗೆ ಮುಖ ತೋರಿಸುತ್ತಾರೆ” ಎಂದು ಕೇಳಿದರು.
BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಬಾಂಬರ್ ಹೊಸ ಪೋಟೋ’ ಬಿಡುಗಡೆ ಮಾಡಿದ ‘NIA’
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ