ನವದೆಹಲಿ: ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್ 17 ಅಂದ್ರೆ, ಸೋಮವಾರ ನಡೆದಿತ್ತು. ಇಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಕಾಂಗ್ರೆಸ್ನ ನೂತನ ಅಧ್ಯಕ್ಷರು ಯಾರಾಗುತ್ತಾರೆ ಎಂದು ಗೊತ್ತಾಗಲಿದೆ.
ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದು, 24 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬಕ್ಕೆ ಸೇರದವರು ಪಕ್ಷದ ಅಧ್ಯಕ್ಷರಾಗಲಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ರಾಹುಲ್ ಗಾಂಧಿ ಅವರು ಸ್ಥಾನದಿಂದ ಕೆಳಗಿಳಿದ ನಂತರ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಹೊಸ ಅಧ್ಯಕ್ಷರು ವಹಿಸಲಿದ್ದಾರೆ.
ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯ ಪ್ರಧಾನ ಕಚೇರಿಯ ಮತಪೆಟ್ಟಿಗೆಗಳು ಕಾಂಗ್ರೆಸ್ ಕಚೇರಿಯ ಮತ ಎಣಿಕೆ ಸ್ಥಳಕ್ಕೆ ತಲುಪಿವೆ.
ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆಯಲ್ಲಿ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ ಎಣಿಕೆಯ ನಂತರ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರು ಫಲಿತಾಂಶ ಪ್ರಕಟಿಸಲಿದ್ದಾರೆ. ಸೋಮವಾರ ನಡೆದ ಚುನಾವಣೆಯಲ್ಲಿ 9,500 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾಯಿಸಿದರು.
BIGG NEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
Expiry Food : ಅವಧಿ ಮೀರಿದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ? ಇಲ್ಲಿದೆ ನೋಡಿ ಮಾಹಿತಿ
BIGG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!