ಮೈಸೂರು : ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಿಜೆಪಿಯವರ ಹಗರಣ ಬಯಲು ಮಾಡುತ್ತೇವೆ. ಮೈಸೂರಿನಲ್ಲಿ ದೊಡ್ಡ ಸಮಾವೇಶ ನಡೆಸುತ್ತೇವೆ. ದೇಶದಲ್ಲಿ ಬಿಜೆಪಿ ಭ್ರಷ್ಟಾಚಾರದ ಪಿತಾಮಹ, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಆರ್. ಅಶೋಕ್, ಬಿ.ವೈ. ವಿಜಯೇಂದ್ರಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಎಷ್ಟು ದಿನ ಮಂತ್ರಿ ಇರ್ತಾರೋ ನೋಡೋಣ,ಅವರು ಮಂತ್ರಿಯಾಗಿ ತುಂಬಾ ದಿನ ಇರಲ್ಲ ಎಂದರು.