ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿರುವಂತ ಕಾಂಗ್ರೆಸ್ ಪಕ್ಷವು, ಇಂದು ಚಿತ್ರದುರ್ಗದಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಸಲಿದೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ನಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಬೃಹತ್ ಐಕ್ಯತಾ ಸಮಾವೇಶ ಆಯೋಗಿಸಲಾಗಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ವಿಶಾಲ ವೇದಿಕೆಯನ್ನು ನಿರ್ಮಿಸಲಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಇಂದಿನ ಬೃಹತ್ ಐಕ್ಯತಾ ಸಮಾವೇಶದಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದೆ.
ಅಂದಹಾಗೇ ದಲಿತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವಂತ ಕಾಂಗ್ರೆಸ್, ಇಂದು ಎಸ್ಸಿ, ಎಸ್ಟಿ ಸಮಾವೇಶ ಮಾಡುತ್ತಿದೆ. ಮಧ್ಯ ಕರ್ನಾಟಕದ ಭಾಗದಲ್ಲೇ ದಲಿತರ ಪ್ರಾಬಲ್ಯದ ಮತಗಳು ಹೆಚ್ಚಿರೋ ಕಾರಣ, ಚಿತ್ರದುರ್ಗದಲ್ಲಿ ಇಂದು ಸಮಾವೇಶ ಮಾಡುತ್ತಿರೋದಾಗಿ ತಿಳಿದು ಬಂದಿದೆ.
Watch Video: ಹೊಸ ವರ್ಷದ ‘ಮೊದಲ ಸೂರ್ಯೋದಯ’ ಹೇಗಿತ್ತು ಗೊತ್ತಾ.? ಇಲ್ಲಿದೆ ವೀಡಿಯೋ ನೋಡಿ
BIGG NEWS : `ಅನ್ನಭಾಗ್ಯ ಯೋಜನೆ’ : ಅಂತ್ಯೋದಯ, BPL ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ