ಬೆಂಗಳೂರು: ದಿನಾಂಕ 21-01-2024ರ ಭಾನುವಾರ ದಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 21-01-2024ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು/ಆಕಾಂಕ್ಷಿಗಳು, ಎಐಸಿಸಿ/ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಎಲ್ಲಾ ಹಂತದ ಅಧ್ಯಕ್ಷರು, ಜಿಲ್ಲಾ/ತಾಲೂಕು ಪಂಚಾಯಿತಿ ಮಾಜಿ ಸದಸ್ಯರು/ಪರಾಜಿತ ಅಭ್ಯರ್ಥಿಗಳು, ಮಹಾನಗರ ಪಾಲಿಕೆ, ನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಮಟ್ಟದಿಂದ ಬೂತ್ ಮಟ್ಟದವರೆಗೆ ಎಲ್ಲಾ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ಈ ಸಮಾವೇಶವನ್ನು ಆಯೋಜಿಸಿರುವ ಬಗ್ಗೆ ಎಲ್ಲ ಹಂತದ ಮುಖಂಡರುಗಳಿಗೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಗೆ ಮಾಹಿತಿ ನೀಡಿ, ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳುವ ಜವಬ್ದಾರಿ ವಹಿಸಿಕೊಂಡು ಆ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಕೋರಿದ್ದಾರೆ.
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ
https://kannadanewsnow.com/kannada/shimoga-gears-up-for-yuvanidhi-scheme-cash-transfer-programme/
Subscribe to Updates
Get the latest creative news from FooBar about art, design and business.