ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಮೊದಲ ಪಟ್ಟಿಯನ್ನು ಲೋಕಸಭಾ ಚುನಾವಣೆಗೆ ಪ್ರಕಟಿಸಲಾಗಿತ್ತು. ನಾಳೆ ಇನ್ನುಳಿದ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.
ದೆಹಲಿಯಲ್ಲಿ ಇಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವುದಾಗಿ ತಿಳಿಸಿದರು.
ದೆಹಲಿಯ ಇಂದಿನ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಪಟ್ಟಿಯನ್ನು ಪ್ರಕಟಿಸುವುದಾಗಿ ಘೋಷಿಸಿದರು.
ಅಂದಹಾಗೇ ನಾಳೆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಉಳಿಕ ಲೋಕಸಭಾ ಕ್ಷೇತ್ರಗಳಿಗೆ ಹೆಸರು ಘೋಷಣೆಗೂ ಮುನ್ನಾ ಉನ್ನತ ಮೂಲಗಳಿಂದ ಸಂಭವನೀಯ ಪಟ್ಟಿ ಹೊರ ಬಿದ್ದಿದೆ. ಕಾಂಗ್ರೆಸ್ ಮೂಲಗಳಿಂದ ದೊರೆತ ಮಾಹಿತಿಯಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೃಣಾಲ್ ಹೆಬ್ಬಾಳ್ಕರ್, ಚಿತ್ರದುರ್ಗಕ್ಕೆ ಚಂದ್ರಪ್ಪ, ಬಾಗಲಕೋಟೆಗೆ ಸಂಯುಕ್ತಾ ಶಿವಾನಂದ ಪಾಟೀಲ್, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕುಮಾರ ನಾಯಕಗೆ ಟಿಕೆಟ್ ಸಿಗೋ ಸಾಧ್ಯತೆ ಇದೆ.
ಇನ್ನೂ ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ, ಧಾರವಾಡ ಕ್ಷೇತ್ರಕ್ಕೆ ವಿನೋದ್ ಅಸೂಟಿ, ಕೊಪ್ಪಳ ಕ್ಷೇತ್ರಕ್ಕೆ ರಾಜಶೇಖರ ಹಿಟ್ನಾಳ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ. ಆ ಬಗ್ಗೆ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತ್ರ ಖಚಿತವಾಗಲಿದೆ.
ಇಷ್ಟು ದಿನ ‘ಪೊಲೀಸ’ರಿಗೆ ‘ಹೆಲ್ಮೆಟ್’ ಧರಿಸೋದು ಕಡ್ಡಾಯವಿರಲಿಲ್ಲವೇ?- ಸಾರ್ವಜನಿಕರ ಪ್ರಶ್ನೆ
BREAKING : ದೆಹಲಿ ಅಬಕಾರಿ ನೀತಿ ಪ್ರಕರಣ : ‘ED ಸಮನ್ಸ್’ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ‘ಕೇಜ್ರಿವಾಲ್’