‘ಮೋದಿ 3ನೇ ಬಾರಿ ಪ್ರಧಾನಿ’ಯಾದ ಒಂದೇ ತಿಂಗಳಲ್ಲಿ ‘ಕಾಂಗ್ರೆಸ್’ ಇಬ್ಬಾಗ – ಬೊಮ್ಮಾಯಿ ಭವಿಷ್ಯ

ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು. … Continue reading ‘ಮೋದಿ 3ನೇ ಬಾರಿ ಪ್ರಧಾನಿ’ಯಾದ ಒಂದೇ ತಿಂಗಳಲ್ಲಿ ‘ಕಾಂಗ್ರೆಸ್’ ಇಬ್ಬಾಗ – ಬೊಮ್ಮಾಯಿ ಭವಿಷ್ಯ