ಬೆಂಗಳೂರು: ಹಾನಗಲ್ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲಿನ ರಾಜಕೀಯ ನಾಯಕರು ಭೇಟಿಗೆ ಅವಕಾಶ ಮಾಡಿಕೊಡುತ್ತಿಲ್ಲ. ಪೊಲೀಸರ ಮೂಲಕ ಅವರನ್ನು ಬೇರೆ ಕಡೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನೈತಿಕ ಪೊಲೀಸ್‌ಗಿರಿ, ದಾದಾಗಿರಿ, ದೌರ್ಜನ್ಯ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಬೆಳಗಾವಿಯಲ್ಲಿ ಬೆತ್ತಲೆ ಮಾಡಿದ ಪ್ರಕರಣವೂ ಹೀಗೆಯೇ ಆಗಿದೆ. ಸರ್ಕಾರ ಸತ್ತುಹೋಗಿದೆ ಎಂದು ಜನರು ಅಂದುಕೊಂಡಿದ್ದಾರೆ. ಬರಗಾಲ ಹಾಗೂ ಕಾನೂನು ಸುವ್ಯವಸ್ಥೆ ಕುಸಿತದ ವಿರುದ್ಧ ಹೋರಾಟ ಮಾಡುತ್ತೇವೆ. ನಾನು ಎಲ್ಲ ಜಿಲ್ಲೆಗಳಲ್ಲಿ ಓಡಾಡಿ ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.
ರಾಜ್ಯದ ಎಲ್ಲಾ ಭಾಗಗಳಲ್ಲಿ ದೇವಾಲಯಗಳಲ್ಲಿ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಜನವರಿ 22 ರಂದು ವಿಶೇಷ ಪೂಜೆ ನಡೆಯಲಿದೆ. ಪದ್ಮನಾಭನಗರ ಶಾಸಕರ ಕಚೇರಿಯ ಬಳಿ ದೇವಸ್ಥಾನ ನಿರ್ಮಿಸುತ್ತಿದ್ದು, ಅಲ್ಲಿಯೇ ಶ್ರೀರಾಮ ಸೀತೆಗೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
‘ರಾಹುಲ್ ಗಾಂಧಿ’ ನೆಲ ಸ್ಪರ್ಶಿಸಿದ ಕಡೆಯಲ್ಲೆಲ್ಲ ‘ಕಾಂಗ್ರೆಸ್’ ಅವನತಿ- ಆರ್.ಅಶೋಕ್
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿನಾ?: ಅನಂತಕುಮಾರ್ ಹೆಗಡೆಗೆ ಹಿಗ್ಗಾಮುಗ್ಗ ಬೈದ ಪ್ರದೀಪ್