ಬೆಂಗಳೂರು : ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಟಾಂಗ್ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಇನ್ನೊಂದು ಟ್ವೀಟ್ ನಲ್ಲಿ ನೋಟ್ ಬ್ಯಾನ್ ಎಂಬ ಮಹಾ ಹಗರಣವನ್ನು ಸುಧಾರಣಾ ಕ್ರಮ ಎಂದು ಬಿಂಬಿಸಿತ್ತು ಬಿಜೆಪಿ. ದೇಶದ ಜನರನ್ನು ನರಕಕ್ಕೆ ತಳ್ಳಿದ ಈ ಕ್ರಮದಿಂದ ಆದ ಪ್ರಯೋಜನವೇನು ಎಂಬುದನ್ನು ಬಿಜೆಪಿ ಇದುವರೆಗೂ ಬಾಯಿ ಬಿಡುತ್ತಿಲ್ಲ. ಇಂಥದ್ದೊಂದು ದುರಂತಮಯ ನಿರ್ದಾರದ ದಾಖಲೆಗಳನ್ನು ಕೇಳುತ್ತಿದೆ ಸುಪ್ರೀಂ ಕೋರ್ಟ್, ದಾಖಲೆ ಕೊಡುವ ಧೈರ್ಯ ಕೇಂದ್ರ ಸರ್ಕಾರಕ್ಕಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
'@BJP4Karnataka ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.
ಬಿಜೆಪಿಯ ದುರಾಡಳಿತವನ್ನು
ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.— Karnataka Congress (@INCKarnataka) December 8, 2022
ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯದ ಕಾರ್ಯಕರ್ತರಲ್ಲಿ ಉತ್ಸಾಹ, ದೃಢತೆ ಹೆಚ್ಚಿಸಿದೆ – ಸಚಿವ ವಿ.ಸುನೀಲ್ ಕುಮಾರ್