ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ. ಮತದಾನಕ್ಕೂ ಮುನ್ನ ಕೇಂದ್ರದ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ನಿರತವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ರ್ಯಾಲಿಗಳನ್ನು ನಡೆಸುತ್ತಿದ್ದಾರೆ, ಅದರಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದರು.

ಗಂಭೀರ ಆರೋಪಗಳನ್ನು ಮಾಡಿದ ಪ್ರಧಾನಿ, “ಕಾಂಗ್ರೆಸ್ ‘ಜಿಹಾದಿ’ ಮತ ಬ್ಯಾಂಕ್ಗೆ ಮೀಸಲಾತಿ ನೀಡಲು ಬಯಸಿದೆ ಅಂತ ಹೇಳಿದರು.

Share.
Exit mobile version