ಬೆಂಗಳೂರು: ರಾಮಸೇವಕರನ್ನು ಬಂಧಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದೂ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಪ್ರಶ್ನಿಸಿದ್ದಾರೆ.
ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದು ಅಭಿಪ್ರಾಯ ಪಟ್ಟಿದ್ದಾರೆ.
BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ
BIG NEWS: ರಾಮಜನ್ಮಭೂಮಿ ಹೋರಾಟಗಾರ ‘ಶ್ರೀಕಾಂತ್ ಪೂಜಾರಿ’ ಬಂಧನ ಪ್ರಕರಣ: ಬರೋಬ್ಬರಿ 15 ಕೇಸ್ ದಾಖಲು