ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು.
‘ಚೀನಾ ಜೊತೆಗಿನ ಗಡಿ ವಿವಾದ ತುರ್ತಾಗಿ ಪರಿಹರಿಸಬೇಕಿದೆ’ : ಪ್ರಧಾನಿ ಮೋದಿ
ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಹಾವೇರಿ ಕ್ಷೇತ್ರದಲ್ಲಿ ಬೊಮ್ಮಾಯಿ ಗೆಲ್ಲೋದು ಸಹ ಅಷ್ಟೇ ಸತ್ಯ 3 ಲಕ್ಷ ಮತಗಳ ಅಂತರದಿಂದ ಬಸವರಾಜ ಬೊಮ್ಮಾಯಿ ಅವರು ಗೆಲ್ಲುತ್ತಾರೆ ಎಂದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಅಂಬೇಡ್ಕರ್ ಬದುಕಿದ್ದಾಗಲೇ ಕಗ್ಗೊಲೆ ಮಾಡಿದವರು ಕಾಂಗ್ರೆಸ್ ಕಾಂಗ್ರೆಸ್ ನವರು. ಕಾಂಗ್ರೆಸ್ನವರು ಎರಡು ಬಾರಿ ಡಾಕ್ಟರ್ ಅಂಬೇಡ್ಕರ್ ಅವರನ್ನು ಸೋಲಿಸಿದರು. ಮೋದಿ ವಿರುದ್ಧ ಆಡಳಿತ ವಿರೋಧಿಯೇ ಇಲ್ಲ. ಒಂದು ದಿನವೂ ರಜೆ ತೆಗೆದುಕೊಳ್ಳದೆ ನರೇಂದ್ರ ಮೋದಿಯವರು ಕೆಲಸ ಮಾಡಿದ್ದಾರೆ.
ಎರಡು ಜಾತಿ ಪಕ್ಷಗಳ ನಡುವೆ ನಡೆಯುತ್ತಿರುವ ಚುನಾವಣೆ ಅಲ್ಲ ಭಾರತದ ಭವಿಷ್ಯ ರೂಪಿಸುವ ಚುನಾವಣೆ. ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ ಆಗುತ್ತದೆ. ಮೋದಿ ಕೊಟ್ಟ ಅಕ್ಕಿ ಚೀಲಕ್ಕೆ ತಮ್ಮ ಫೋಟೋ ಹಾಕಿಕೊಂಡು ಕಾಂಗ್ರೆಸ್ ಅವರು ಪ್ರಚಾರ ಮಾಡುತ್ತಿದ್ದಾರೆ ಕಳೆದ 9 ತಿಂಗಳಿಂದ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು?