ಮೈಸೂರು : ನಾಳೆ ನಡೆಯುವ ಬಜೆಟ್ ನಲ್ಲಿ ನಮಗೆ ಯಾವುದೇ ರೀತಿಯಾದ ನಿರೀಕ್ಷೆಗಳಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ನವರೇ ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಳೆಯ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆ ಇಲ್ಲ. ಆಡಳಿತ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಇಂಥವರು ಮಂಡಿಸುವ ಬಜೆಟ್ ಮೇಲೆ ನಿರೀಕ್ಷೆಯಿಲ್ಲ. ಏನೇ ಘೋಷಣೆಯಾದರೂ ಕೇವಲ ಪೇಪರ್ ನಲ್ಲಿ ಇರುತ್ತದೆ ಎಂದು ಕಿಡಿ ಕಾರಿದರು.
ಜಾತಿ ಧರ್ಮಗಳ ನಡುವೆ ಎತ್ತಿ ಕಟ್ಟುವುದರಲ್ಲಿ ನಿಸೀಮರು. ಕಂಡ ಕಂಡಲ್ಲಿ ಚೀಲವನ್ನು ಹಿಡಿದುಕೊಂಡು ನಿಂತಿದ್ದಾರೆ. ಕುಟುಂಬಸ್ಥರೇ ಏಜೆಂಟ್ ಬ್ರೋಕರ್ ಗಳಾಗಿದ್ದಾರೆ.ಇದು ಬಂಡಗೆಟ್ಟ ಸರ್ಕಾರ ಎಂದು ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸ್ ಅನ್ನು ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಅಶ್ವಥ್ ನಾರಾಯಣ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ಬಿಜೆಪಿಯ ಶಾಸಕರ ವಿರುದ್ಧ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತಂತೆ ನಾವು ಕಾನೂನು ಹೋರಾಟವನ್ನು ಮಾಡುತ್ತೇವೆ. ದೇಶ ವಿಭಜನೆ ಹೇಳಿಕೆಯ ಕೊಟ್ಟವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಡಿಕೆ ಸುರೇಶ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಆದರೆ ನಮ್ಮ ಪಕ್ಷದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ ನಮ್ಮ ಸಂಸ್ಕೃತಿ ಉಳಿಸಿಕೊಳ್ಳುವ ನಟ್ಟಿಯಲ್ಲಿ ನಾವು ಹೋರಾಟವನ್ನು ಮಾಡುತ್ತೇವೆ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಅಶ್ವತ್ ನಾರಾಯಣ್ ತಿಳಿಸಿದರು.
ಹೊಸ ‘BPL, APL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ಏ.1ರಿಂದ ‘ರೇಷನ್ ಕಾರ್ಡ್’ವಿತರಣೆ
HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡ ರಾಜ್ಯ ಸರ್ಕಾರ!
ದಾವಣಗೆರೆ:ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡು ‘ಆತ್ಮಹತ್ಯೆಗೆ’ ಯತ್ನಿಸಿದ ಪೋಲಿಸ್ ಪೇದೆ