Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಮುಂಜಾನೆಯ ಈ 5 ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್
KARNATAKA

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಒದಗಿಸಲಾಯಿತು. ಈ ಪೈಕಿ 1480 ಕೋಟಿ ರೂ. ಶಿಕ್ಷಣ ಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಎಂಜಿನಿಯರರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ. ವಿದೇಶದಲ್ಲಿ ವ್ಯಾಸಂಗಕ್ಕೆ ಹೋಗುವಂತಾಗಿದೆ. ಐ ಎಸ್ -ಐಪಿಎಸ್ ತರಬೇತಿ ಪಡೆಯುವಂತಾಗಿದೆ. ಕಾಂಗ್ರೆಸ್ ಅಧಿಕಾರ ದಲ್ಲಿದ್ದಾಗ ಮಾತ್ರ ಇದು ಸಾಧ್ಯವಾಗಿದೆ . ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ತಿಳಿಸಿದರು.

ಕೆಎಂಡಿಸಿ ಯಿಂದ ಶಿಕ್ಷಣ ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಾಕಷ್ಟು ಯೋಜನೆ ರೂಪಿಸಲಾಗಿದೆ. ಬಿಕೆ ಅಲ್ತಾಫ್ ಖಾನ್ ಅವರು ಅಧ್ಯಕ್ಷ ರಾದ ನಂತರ ಬದ್ಧತೆ ಯಿಂದ ಬದಲಾವಣೆ ತಂದಿದ್ದಾರೆ ಎಂದು ಶ್ಲಾಘನೆ ಮಾಡಿದರು. ವಖ್ಫ್ ಬೋರ್ಡ್ ನಲ್ಲೂ ಅನ್ವರ್ ಬಾಷಾ ಅಧ್ಯಕ್ಷ ರಾಗಿ ನನಗೆ ಉತ್ತಮ ಸಹಕಾರ ಕೊಡುತ್ತಿರುವುದರಿಂದ ವಖ್ಫ್ ಆಸ್ತಿ ಸಂರಕ್ಷಣೆ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.

ಹಜ್ ಯಾತ್ರಿಗಳ ಸೇವೆ ಸಲ್ಲಿಸಿದ ಸ್ವಯಂ ಸೇವಕರನ್ನು ವೈಯಕ್ತಿಕವಾಗಿ ಉಮ್ರಾ ಯಾತ್ರೆ ge ಕಳುಹಿಸಲಾಗುತ್ತಿದ್ದು, ಎ ಬಾರಿಯೂ 220 ಮಂದಿಗೆ ವ್ಯವಸ್ಥೆ ಮಾಡಲಾಗಿದೆ.

ಶಹಾಬ್ಬಾಸ್ ಗಿರಿ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ಜಮೀರ್ ಅಹಮದ್ ಖಾನ್ ಸಮುದಾಯದ ನಾಯಕನಾಗಿ ಹೊರ ಹೊಮ್ಮಿ ಎಲ್ಲರನ್ನೂ ಜತೆಗೂಡಿಸಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಮುದಾಯ ಒಟ್ಟಿಗೆ ಇದ್ದರೆ ಅದೇ ಶಕ್ತಿ ಎಂದು ಹೇಳಿದರು.

ಮೌಲಾನಾ ಮಕ್ಸುದ್ ಇಮ್ರಾನ್, ಸಚಿವ ರಹೀಮ್ ಖಾನ್, ಮಾಜಿ ಸಚಿವ ಹಿಂಡಸಗೇರಿ ಶಾಸಕ ರಾದ ಇಕ್ಬಾಲ್ ಹುಸೇನ್, ಅಬ್ದುಲ್ ಜಬ್ಬಾರ್, ಐ ವಾನ್ ಡಿಸೋಜ,ಬಿಲ್ಕಿಸ್ ಬಾನು, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಕೆ ಎಂ ಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ಎಂಡಿ ಮೊಹಮ್ಮದ್ ನಜೀರ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಶಿ,ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ 177 ಆಟೋ ರಿಕ್ಷಾ 68 ಟ್ಯಾಕ್ಸಿ, 30 ಗೂಡ್ಸ್ ವಾಹನ ಸೇರಿ 579 ಮಂದಿಗೆ 7.86 ಕೋಟಿ ರೂ. ಮೊತ್ತದ ಸವಲತ್ತು ವಿತರಿಸಲಾಯಿತು.

ಸಮೀಕ್ಷೆ

ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸೂರು ಕಲ್ಪಿಸುವುದು ನಮ್ಮ ಸರ್ಕಾರ ದ ಸಂಕಲ್ಪ. ಸಿದ್ದರಾಮಯ್ಯ ಅವರ ಬಡವರ ಪರ ಕಾಳಜಿಯಿಂದ ಅದು ಸಾಧ್ಯ ವಾಗಲಿದೆ. ಈಗಾಗಲೇ 2.32 ಲಕ್ಷ ಬಡವರಿಗೆ ಮನೆ ಕಟ್ಟಿಕೊಡುವ ಕ್ರಾಂತಿ ಕಾರಕ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

‘ರಾಹುಲ್ ಗಾಂಧಿ’ ವಿರುದ್ಧ ಸಿಡೆದೆದ್ದ ‘ಛಲವಾಧಿ ನಾರಾಯಣಸ್ವಾಮಿ’: ‘ಕಾಂಗ್ರೆಸ್’ ವಿರುದ್ಧ ಹೋರಾಟಕ್ಕೆ ಜನರಿಗೆ ಕರೆ

BREAKING: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು | Serial Actor Varun Aaradhya

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read
Recent News

ALERT : ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಮುಂಜಾನೆಯ ಈ 5 ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

State News
KARNATAKA

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow57 KARNATAKA 2 Mins Read

ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.