ಬೆಂಗಳೂರು: ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ
ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು ಬಿಚ್ಚುವುದಿದ್ದರೇ ಬಿಚ್ಚಿಕೊಳ್ಳಲಿ” ಎಂದು ತಿಳಿಸಿದರು.
BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ
BREAKING: ನೀಟ್ ವಿರುದ್ಧದ ನಿರ್ಣಯವನ್ನು ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಂಗೀಕಾರ | NEET Exam
ನಾನು ಯಾವುದೇ ಕಾರಣಕ್ಕೆ ‘ನಟ ದರ್ಶನ್’ ಕೇಸಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ