ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಈ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್ .ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿ ಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿ ಯವರನ್ನು ಸೇರಿಕೊಂಡಿದ್ದಾರೆ. ದೇವೇಗೌಡರು ನರೇಂದ್ರ ಮೋದಿ ಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಲಿದೆ
ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದರು. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದರು.
ಜನ ಕಾಂಗ್ರೆಸ್ ಕೈಹಿಡಿಯಲ್ಲಿದ್ದಾರೆ
ಕ್ರಿಮಿನಲ್ ಪಕ್ಷ ದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದ್ದಾರೆ. ಅದಕ್ಕೆ ಅವರು ಸಿದ್ದರಾಮಯ್ಯ ಅವರ ಗರ್ವ ಭಂಗ ಮಾಡುವುದಾಗಿ ಹೇಳಿದ್ದಾರೆ. ದೇವೇಗೌಡರು, ಬಿಜೆಪಿ ಏನೇ ಹೇಳಿದರೂ ಈ ಸಾರಿ ಕರ್ನಾಟಕದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.