Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM

BREAKING : ಮಧ್ಯಪ್ರಾಚ್ಯದಲ್ಲಿ ಏರೋಸ್ಪೇಸ್ ಬಂದ್ : ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

24/06/2025 7:53 AM

Big News: ಪಾಕಿಸ್ತಾನದ ಸರ್ದಾರ್ ಜಿ 3 ಚಿತ್ರ ಪ್ರಚಾರ : ದಿಲ್ಜಿತ್ ದೋಸಾಂಜ್ ನಿಷೇಧಿಸಲು ಚಲನಚಿತ್ರ ಮಂಡಳಿ ನಿರ್ಧಾರ

24/06/2025 7:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
KARNATAKA

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

By kannadanewsnow5712/03/2024 8:42 AM

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊನ್ನೆ ನಡೆದ ವಿಧಾನಪರಿಷತ್ ಚುನಾವಣೆ ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?

ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು. ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು, ನಾವು ಮಾಡಿದ ಕೆಲಸಕ್ಕೆ ಲೋಕಸಭೆ ಚುನಾವಣೆಯಲ್ಲಿ ಕೂಲಿ ಕೊಡಿ ಎಂದು ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಗೌರವ ತಂದುಕೊಟ್ಟವರು ನಾವು. ಇದನ್ನು ಜನರು ತಮ್ಮ ಹೃದಯಕ್ಕೆ ಕೇಳಿಕೊಂಡು ಯಾರಿಗೆ ಮತ ಹಾಕಬೇಕು ಎಂದು ತೀರ್ಮಾನಿಸಬೇಕು.

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ನಮ್ಮ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ಬಿಟ್ಟಿಭಾಗ್ಯ ಎಂದು ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಹೀನ ಮಾತುಗಳಿಂದ ಅವಮಾನಿಸುತ್ತಾರೆ.

ನಿಮ್ಮನ್ನೇ ಅವಮಾನಿಸುವ ಬಿಜೆಪಿಗೆ ನಿಮ್ಮ ಅಮೂಲ್ಯ ಮತ ನೀಡುತ್ತೀರ? ನಿಮ್ಮ ಮತಕ್ಕೆ ಅವರು ಅರ್ಹರಿದ್ದಾರ?  ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸುವ, ಮನುಸ್ಮೃತಿ ಪರವಾದ ಮಾತಗಳನ್ನು ಆಡುತ್ತಿದೆ ಎಂದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿಕೊಂಡು ಬಿಜೆಪಿ ಮತ್ತು ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

Congress will win Lok Sabha elections this time: Siddaramaiah ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM1 Min Read

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

24/06/2025 7:48 AM1 Min Read

ರೈತರಿಗೆ ಬಂಪರ್…! ಸಾರ್ವಕಾಲಿಕ ದಾಖಲೆ ಬರೆದ ಕೊಬ್ಬರಿ ದರ : ಕ್ವಿಂಟಾಲ್ ಗೆ 26,167 ರೂ.!

24/06/2025 7:42 AM1 Min Read
Recent News

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM

BREAKING : ಮಧ್ಯಪ್ರಾಚ್ಯದಲ್ಲಿ ಏರೋಸ್ಪೇಸ್ ಬಂದ್ : ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

24/06/2025 7:53 AM

Big News: ಪಾಕಿಸ್ತಾನದ ಸರ್ದಾರ್ ಜಿ 3 ಚಿತ್ರ ಪ್ರಚಾರ : ದಿಲ್ಜಿತ್ ದೋಸಾಂಜ್ ನಿಷೇಧಿಸಲು ಚಲನಚಿತ್ರ ಮಂಡಳಿ ನಿರ್ಧಾರ

24/06/2025 7:49 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

24/06/2025 7:48 AM
State News
KARNATAKA

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

By kannadanewsnow5724/06/2025 7:56 AM KARNATAKA 1 Min Read

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು,…

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

24/06/2025 7:48 AM

ರೈತರಿಗೆ ಬಂಪರ್…! ಸಾರ್ವಕಾಲಿಕ ದಾಖಲೆ ಬರೆದ ಕೊಬ್ಬರಿ ದರ : ಕ್ವಿಂಟಾಲ್ ಗೆ 26,167 ರೂ.!

24/06/2025 7:42 AM

BREAKING : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರಿನ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

24/06/2025 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.