ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಭರ್ಜರಿ ಜಯಗಳಿಸಿದ್ದಾರೆ. ಆ ಮೂಲಕ ರಾಜ್ಯದ ಅತ್ಯಂತ ಹಿರಿಯ ಸದಸ್ಯ ಎಂದು ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ತಮ್ಮ ಗೆಲುವು ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಅಡ್ವಾನ್ಸ್ ಆಗಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಮೋಸದಿಂದ 9 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಮೋಸದಿಂದ 9ಸ್ಥಾನ ಗೆದ್ದಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಜೇತ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿಕೆ ನೀಡಿದರು. ಕಾಂಗ್ರೆಸಿಗರು ಅಡ್ವಾನ್ಸ್ ಆಗಿ ಗ್ಯಾರಂಟಿ ಕೊಟ್ಟು ಮೋಸ ಮಾಡಿದ್ದರು ಎಂದು ಅವರು ತಿಳಿಸಿದರು.
ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇಲ್ಲಿ ಲೂಟಿ ಹೊಡೆದು ನೆರೆ ರಾಜ್ಯಗಳಿಗೆ ಹಣ ಕಳುಹಿಸಿಕೊಟ್ಟಿದ್ದಾರೆ.ಮೋಸದಿಂದ ಗೆದ್ದ ಕಾಂಗ್ರೆಸ್ ಜಯ ನಿಜವಾದ ಜಯ ಅಲ್ಲ ಜನರ ನಿರೀಕ್ಷೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ನೂತನ ಸಂಸತ್ ಸದಸ್ಯ ಗೋವಿಂದ ಕಾರಜೋಳ ಹೇಳಿಕೆ ನೀಡಿದರು.