Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM

ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

06/03/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉಪ ಚುನಾವಣೆ’ಯಲ್ಲಿ ಹಣದ ಹೊಳೆ ಹರಿಸಿ ‘ಕಾಂಗ್ರೆಸ್ ಗೆಲುವು’: ಆರ್.ಅಶೋಕ್ ಗಂಭೀರ ಆರೋಪ
KARNATAKA

‘ಉಪ ಚುನಾವಣೆ’ಯಲ್ಲಿ ಹಣದ ಹೊಳೆ ಹರಿಸಿ ‘ಕಾಂಗ್ರೆಸ್ ಗೆಲುವು’: ಆರ್.ಅಶೋಕ್ ಗಂಭೀರ ಆರೋಪ

By kannadanewsnow0923/11/2024 3:36 PM

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್‌ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು.

ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಪಕ್ಷ ಗೆಲ್ಲಲಿದೆ. ಕಾಂಗ್ರೆಸ್‌ನ ಪಾಪದ ಕೊಡ ಬಹುತೇಕ ತುಂಬಿದೆ. ಪೂರ್ತಿ ತುಂಬಿದ ಬಳಿಕ ಪಕ್ಷ ಅವನತಿಗೆ ಹೋಗಲಿದೆ. ಕಾಂಗ್ರೆಸ್‌ ಸರ್ಕಾರದ ಹಗರಣಗಳನ್ನು ಇನ್ನಷ್ಟು ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್‌ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಯಶಸ್ಸು ದೊರೆತಿದೆ. ಜಾರ್ಖಂಡ್‌ನಲ್ಲಿ ಮತ ಗಳಿಕೆ ಕಡಿಮೆಯಾಗಿದೆ. ಒಟ್ಟಾರೆಯಾಗಿ ಜನರ ಅಭಿಪ್ರಾಯವನ್ನು ಗೌರವಿಸುತ್ತೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಹೇಳಿತ್ತು. ಆದರೆ ಜನರು ಅವರನ್ನು ತಿರಸ್ಕರಿಸಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಅನಂತ ಧನ್ಯವಾದಗಳು: ಸಿಎಂ ಸಿದ್ಧರಾಮಯ್ಯ

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM3 Mins Read

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM1 Min Read

ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

06/03/2026 4:27 PM4 Mins Read
Recent News

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM

ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

06/03/2026 4:27 PM

ಸಾಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 6,000 ಮತದಾರರ ಹೆಸರು ಕೈಬಿಡಲು ಕ್ರಮ

06/03/2026 4:20 PM
State News
KARNATAKA

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By kannadanewsnow0906/03/2026 4:32 PM KARNATAKA 3 Mins Read

ದಾವಣಗೆರೆ : ರಾಜ್ಯದ ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2026–27ನೇ ಸಾಲಿನಲ್ಲಿ…

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM

ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

06/03/2026 4:27 PM

ಸಾಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 6,000 ಮತದಾರರ ಹೆಸರು ಕೈಬಿಡಲು ಕ್ರಮ

06/03/2026 4:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.