ಗದಗ: ಜಿಲ್ಲೆಯಲ್ಲಿ ನಡೆದಂತ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರೋ ಘಟನೆ ನಡೆದಿದೆ.
ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶರಣಪ್ಪ ಸಂದೀಗೌಡರ್ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡ ಶರಣಪ್ಪ ಅವರನ್ನು ಬೈಕ್ ಅಡ್ಡಗಟ್ಟಿ ಮರಕ್ಕೆ ಹಗ್ಗದಿಂದ ಕಟ್ಟಿಹಾಕಿ ಭರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಗದಗ ಜಿಲ್ಲೆಯ ಡೋಣಿ ಗ್ರಾಮದ ಶರಣಪ್ಪ ಅವರು, ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ಗುರುತಿಸಿಕೊಂಡಿದ್ದರು. ಇಂತಹ ಅವರನ್ನು ಹತ್ಯೆ ಮಾಡಿರೋ ಸುದ್ದಿಯನ್ನು ಕೇಳಿದಂತ ಡೋಣಿ, ಡಾಂಬಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಲೆಕ್ಟ್ರಿಕ್ ಕಾರು ಉಡುಗೊರೆ: ಆನಂದ್ ಮಹೀಂದ್ರಾಗೆ ಧನ್ಯವಾದ ಅರ್ಪಿಸಿದ ಚೆಸ್ ತಾರೆ ಆರ್ ಪ್ರಗ್ನಾನಂದ
ʻಭಾರತೀಯ ಪೌರತ್ವʼಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಗೆ ಭೇಟಿ ನೀಡಿ | Indian citizenship