ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಸಿಎಂ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಹೇಳಿಕೆ ನೀಡದಂತೆ ಖಡಕ್ ಸೂಚನೆ ನೀಡಿದ್ದರು. ಹೀಗಿದ್ದರೂ ಸಹಕಾರ ಸಚಿವ ಕೆಎನ್ ರಾಜಣ್ಣ ಮಾತ್ರ ಅಧ್ಯಕ್ಷರ ಸೂಚನೆಯ ನಂತ್ರವೂ ಡಿಸಿಎಂ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ನೀಡಿರುವಂತ ದೂರಿನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಎಐಸಿಸಿ ಅಧ್ಯಕ್ಷ ಹೇಳಿಕೆ ಬಳಿಕವೂ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡುತ್ತಿದ್ದಾರೆ. ಪದೇ ಪದೇ ಸಚಿವ ರಾಜಣ್ಣ ಅಧ್ಯಕ್ಷರ ಆದೇಶದ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.
ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧವೇ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡುತ್ತಿದ್ದಾರೆ. ರಾಜಣ್ಣ ಅನಾವಶ್ಯಕವಾಗಿ ಡಿಸಿಎಂ ವಿಚಾರವಾಗಿ ಮಾತನಾಡುತ್ತಿದ್ದಾರೆ. ಬೇಜವಾಬ್ದಾರಿಯಿಂದ ಕೂಡಿದಂತ ಹೇಳಿಕೆ ನೀಡುತ್ತಿದ್ದಾರೆ. ಸಚಿವರ ಡಿನ್ನರ್ ಮೀಟಿಂಗ್ ಗಳು ತಪ್ಪು ಸಂದೇಶವನ್ನು ರವಾನಿಸುತ್ತಿವೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಕೆ.ಎನ್ ರಾಜಣ್ಣ ಕೈಬಿಡುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’
ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು