ಸುಭಾಷಿತ :

Wednesday, April 8 , 2020 12:35 AM

ಬ್ರೇಕಿಂಗ್ ನ್ಯೂಸ್ : ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮುಕ್ತಾಯ : AICC ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮುಂದುವರಿಕೆ, ಸಂಪೂರ್ಣ ಸ್ಪಾತಂತ್ರ್ಯ


Saturday, May 25th, 2019 4:14 pm

ನವದೆಹಲಿ :  ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಸಲು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಇದರ ಜೊತೆಗೆ ರಾಹುಲ್ ಗಾಂಧಿಗೆ ಪಕ್ಷ ಸಂಘಟನೆಯ ಬದಲಾವಣೆಗೆಗಾಗಿ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ.

ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಹತ್ವದ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ರಾಜ್ಯಾಧ್ಯಕ್ಷರು ಸೇರಿದಂತೆ ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದೇ ತಿರಸ್ಕರಿಸಿದ ನಾಯಕರು, ಮುಂದಿನ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ವರೆಗೆ, ರಾಹುಲ್ ಗಾಂಧಿಯವರನ್ನೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಮನವೊಲೀಸಲಾಯಿತು.

ಇದಲ್ಲದೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿರುವ ರಾಹುಲ್ ಗಾಂಧಿಯವರಿಗೆ ಪಕ್ಷ ಸಂಘಟನೆಗಾಗಿ ಕಾಂಗ್ರೆಸ್ ನಲ್ಲಿನ ಬದಲಾವಣೆ ಬಗ್ಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷರಾಗಿ ಸದ್ಯಕ್ಕೆ ರಾಹುಲ್ ಗಾಂಧಿಯೇ ಮುಂದುವರೆಯಲಿದ್ದು, ಮುಂದಿನ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಏನ್ ಆಗುತ್ತದೋ ಎಂದು ಕಾದು ನೋಡಬೇಕಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions