ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ವಾಗ್ಧಾಳಿ ನಡೆಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಮಾಧ್ಯಮಗಳು ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು ನಿರಂತರ ವರದಿ ಮಾಡುತ್ತಿದೆ, ಹಾಗಾಗಿ ಪರ್ತಕರ್ತರಿಗೆ ಲಂಚ ನೀಡಿದೆ. ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಕರ್ನಾಟಕದಲ್ಲಿ ಲಂಚ ನೀಡದಿದ್ದರೆ ಯಾವ ಕೆಲಸವೂ ಆಗಲ್ಲ,ಅನುದಾನಗಳನ್ನು ಪಡೆಯಲು ಸ್ವಾಮೀಜಿಗಳು ಸರ್ಕಾರಕ್ಕೆ ಲಂಚ ಕೊಡಬೇಕಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ. ಪೊಲೀಸ್ ಇನ್ ಸ್ಪೆಕ್ಟರ್ ಹುದ್ದೆಗೂ 80 ಲಕ್ಷ ಲಂಚ ನೀಡಬೇಕಾಗಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸಬೇಕು, ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು| New Rule From 1st November
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
‘ಕೋಟಿ ಕಂಠ ಗಾಯನ’ ಎನ್ನುತ್ತಲೇ ಸರ್ಕಾರ ಕನ್ನಡದ ಕತ್ತು ಸೀಳುವುದಾ ..? : H.D ಕುಮಾರಸ್ವಾಮಿ ವಾಗ್ಧಾಳಿ