ಮಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
SIT ಅಂತಿಮ ವರದಿಯನ್ನು ಕೋರ್ಟಿಗೂ ಸಲ್ಲಿಸಬೇಕಿದೆ ಅಂತಿಮ ವರದಿ ನೀಡುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದಿಲ್ಲ. ಅಂತಿಮ ವರದಿ ನೀಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಬುರುಡೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸದನದೊಳಗೆ ಮತ್ತು ಸದಾನಂದ ಹೊರಗೆ ಪ್ರತಿಕ್ರಿಯಿಸಿದ್ದೇನೆ. ಎಸ್ಐಟಿ ಅಂತಿಮ ವರದಿ ಬಂದ ನಂತರ ಕ್ಯಾಬಿನೆಟ್ ನಲ್ಲಿ ಇಡುತ್ತೇವೆ. ಕ್ಯಾಬಿನೆಟ್ ನಲ್ಲಿ ನಿರ್ಧರಿಸಿದ ನಂತರ ಬಹಿರಂಗಗೊಳಿಸುವ ಕೆಲಸ ನಡೆಯುತ್ತೆ ಎಂದು ತಿಳಿಸಿದರು.








