ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧ ಮಾಜಿ ಶಾಸಕರೂ ಆಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆ ನಡೆಸಿದ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಇಂದು (ಡಿ.30) ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಇತ್ತೀಚೆಗೆ ಬಸವರಾಜನ್ ಗೆ ಕೂಡ ಜಾಮೀನು ಮಂಜೂರು ಆಗಿತ್ತು.
ಸೌಭಾಗ್ಯ ಮಠದ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿದ್ದಾರೆ. ಇರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಟ್ಟಿದ್ದರು.ನವೆಂಬರ್ 9 ರಂದು ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆದಿದೆ ಎಂದು ಮಠದ ಉಸ್ತುವಾರಿ ಬಸವಪ್ರಭು ಶ್ರೀ ಅವರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ನವೆಂಬರ್ 10 ರಂದು ಬಸವರಾಜೇಂದ್ರ ಬಂಧಿಸಿ ಪೊಲೀಸರ ವಿಚಾರಣೆ ನಡೆಸಿ ಹಲವು ಮಾಹಿತಿ ಪಡೆದಿದ್ದರು. ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಬಂಧನ ಆಗಿತ್ತು. ನಂತರ ಸೌಭಾಗ್ಯ ಬಸವರಾಜನ್ ಅವರನ್ನು ಕೂಡ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ದೇವರೇ ‘ಮೂರ್ತಿ’ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು : ದೇವರಿಗೆ ವಿಚಿತ್ರ ಹರಕೆಯ ಪತ್ರ ವೈರಲ್
ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ