ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಡಿ.22 ರಂದು ಹೈಕೋರ್ಟ್ ಜಾಮೀನು ನೀಡಿತ್ತು. ಹಾಗಾಗಿ ಅವರು ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನವೆಂಬರ್ 10ರಂದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಸವರಾಜನ್ ನ್ಯಾಯಾಂಗ ಬಂಧನದಲ್ಲಿದ್ದರು. ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಬೆಂಗಳೂರು ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾದ ಹಿನ್ನಲೆ ಬಿಡುಗಡೆಯಾಗುತ್ತಿದ್ದಾರೆ.
ಡಿಸೆಂಬರ್ 22ರಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ದೊರೆತಿತ್ತು. ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿ ಬಸವಪ್ರಭು ಸ್ವಾಮೀಜಿ ಅವರು, ಬಸವರಾಜನ್ ವಿರುದ್ಧ ದೂರು ನೀಡಿದ್ದರು.
BIGG NEWS : ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ‘ಖಾಸಗಿ ಬಸ್’ಗಳು
BREAKING NEWS : ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ