ಉತ್ತರಕನ್ನಡ : ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು 400ಕ್ಕೂ ಅಧಿಕ ಸೀಟು ಗೆಲ್ಲಬೇಕು ಅಂದಿದ್ದಾರೆ. 400 ಯಾಕೆ ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನ ತಿದ್ದುಪಡಿ ಮಾಡೋದಾದರೆ ಬಹುಮತ ಅವಶ್ಯ ಎಂದು ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ನಿದ್ದಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ ಎಂದರು.
ಹೀಗಾಗಿ ಈ ಬಾರಿ ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತ ಅಗತ್ಯವಿದೆ ಎಂದರು.
ಹಿಂದಿನ ಬಾರಿ ಶೇಕಡಾ 68 ರಷ್ಟು ವೋಟು ನಮಗೆ ಬಂದಿತ್ತು. ಒಟ್ಟೂ ಹಿಂದೂಗಳ ಶೇ.85 ರಷ್ಟು ವೋಟು ಈ ಕ್ಷೇತ್ರದಲ್ಲಿ ಬಂದಿತ್ತು. ಒಂದು 15, 10 ಪರ್ಸೆಂಟ್ ಸೋಡಾಬಾಟ್ಲಿ ಇರುತ್ತವೆ, ಅದಕ್ಕೆ ನಾವು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಯಾರೂ ಇಲ್ಲ ಅಂದರೆ ಕುಸ್ತಿ ಯಾರ್ ಹತ್ರ ಆಡೋದು? ನಮ್ಮ ದೇಶ ಸರಿ ಆಗಬೇಕು ಅಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಸಾಧ್ಯವಿಲ್ಲ ಎಂದರು.