ಬಳ್ಳಾರಿ: ಸಂವಿಧಾನವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನದಿಂದಾಗಿ ನಮ್ಮ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದು, ಎಲ್ಲರೂ ಸಮಾನವಾಗಿ ಬದುಕಿನ ನೆಲೆ ಕಂಡುಕೊಳ್ಳಲು ಸಹಾಯಕವಾಗಿದೆ ಎಂದು ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಟಿ.ಹನುಮಂತರೆಡ್ಡಿ ಅವರು ಹೇಳಿದರು.
“ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನಗರದ ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿದ್ದ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂವಿಧಾನವು ಬಹಳ ಮಹತ್ವ ಪೂರ್ಣವಾಗಿದ್ದು, ಎಲ್ಲರೂ ಗೌರವಿಸುವರ ಮೂಲಕ, ಅದರ ಮೌಲ್ಯ ಮತ್ತು ಆಶೋತ್ತರಗಳನ್ನು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಾದ ಅಂಬಿಕಾ, ಕಲ್ಗುಡಿ ಬಸವರಾಜ, ಬಸವರಾಜ.ಎನ್ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು