ಉತ್ತರಕನ್ನಡ: ಜಿಲ್ಲೆಯಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದೇ ದಿನದಲ್ಲಿ ನಿರ್ಧಾರ ಮಾಡುವುದು ಕಷ್ಟವಾಗುತ್ತದೆ. ಆದರೆ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡೇ ಮಾಡುತ್ತೇವೆ ಎಂದಿದ್ದಾರೆ.
BIGG NEWS : `ವಲಸೆ ಕಾರ್ಮಿಕರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 7 ಕಡೆ `ಟ್ರಾನ್ಸಿಟ್ ಮನೆ’ಗಳ ನಿರ್ಮಾಣ
ನಗರದಲ್ಲಿ ಮಾತನಾಡಿದ ಅವರು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಟೀಕೆ ಟಿಪ್ಪಣಿಗಳನ್ನು ಗಮನಿಸಿದ್ದೇವೆ. ನಾವು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ. ಅದೇ ರೀತಿ ಸಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಿದ್ದರೂ ಅದಕ್ಕೆ ಅಗತ್ಯವಿರುವ ಭೂಮಿ, ರಸ್ತೆ ಸಂಪರ್ಕ ಹಾಗೂ ನೀರಿನ ವ್ಯವಸ್ಥೆ ಜೊತೆಗೆ ಅಗತ್ಯವಿದ್ದಲ್ಲಿ ಹಣಕಾಸಿನ ನೆರವನ್ನೂ ನೀಡುವ ಭರವಸೆಯನ್ನು ನೀಡಿದ್ದಾರೆ.ಹೀಗಾಗಿ ಈಗ ಆಗತ್ತೆ, ಇಲ್ಲ ಆಗಲ್ಲ ಎನ್ನುವುದನ್ನು ಹೇಳುವುದು ಸರಿಯಲ್ಲ, ಆಸ್ಪತ್ರೆಯನ್ನು ನಿರ್ಮಿಸುವುದು ಸರ್ಕಾರದ ಬದ್ಧತೆ ಎಂದರು.